ಡಿಕೆಶಿ, ಯತ್ನಾಳ ಹೇಳಿಕೆಗೆ ವಕೀಲರ ಆಕ್ರೋಶ
Jul 30 2024, 12:33 AM ISTಕನ್ನಡಪ್ರಭ ವಾರ್ತೆ ಜಮಖಂಡಿ ವಕೀಲರು ಕಮೀಷನ್ ದಂಧೆ ಮಾಡುತ್ತಿಲ್ಲ, ಬದಲಾಗಿ ಬಡ ರೈತರಿಗೆ ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಜಮಖಂಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ದಾನಪ್ಪ ಜತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ವಿಜಯಪುರ ನಗರ ಶಾಸಕ ಬಸವನಗೌಡ ಯತ್ನಾಳ ಅವರ ಹೇಳಿಕೆಯನ್ನು ವಿರೋಧಿಸಿ ಜಮಖಂಡಿ ಪಟ್ಟಣದ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶ ಹೊರಹಾಕಿದರು.