ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು:ಶಾಸಕ ಬಸನಗೌಡ ಪಾಟೀಲ ಯತ್ನಾಳ
Dec 26 2023, 01:31 AM ISTವಿಜಯಪುರ: ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ಹೇಳಿದರು.