ಯತ್ನಾಳ ಪರ ಹಿಂದು ಸಂಘಟನೆಗಳ ಪ್ರತಿಭಟನೆ
Apr 02 2025, 01:03 AM ISTಕನ್ನಡಪ್ರಭ ವಾರ್ತೆ ತಾಳಿಕೋಟೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಉಚ್ಚಾಟಿಸಿರುವುದನ್ನು ಖಂಡಿಸಿ ಮಿಣಜಗಿ ಗ್ರಾಮದಲ್ಲಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಭಾವಚಿತ್ರಗಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದರು. ಅಲ್ಲದೇ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.