ಯತ್ನಾಳ ಪರ ಅಭಿಮಾನಿಗಳ ಬೃಹತ್ ಪ್ರತಿಭಟನೆ
Mar 29 2025, 12:36 AM ISTಕನ್ನಡಪ್ರಭ ವಾರ್ತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಛಾಟನೆ ಮಾಡಿದ ಕ್ರಮ ಖಂಡಿಸಿ ವಿವಿಧ ಸಂಘಟನೆಗಳ ಪ್ರಮುಖರು, ಯತ್ನಾಳ ಅಭಿಮಾನಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಪ್ರತಿಭಟನೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಗಾಂಧಿ ವೃತ್ತ ತಲುಪಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕೃತಿ ದಹಿಸಿ ಅಸಮಾಧಾನ ಹೊರಹಾಕಿದರು. ವಿಜಯೇಂದ್ರ ವಿರುದ್ದ ಘೋಷಣೆ ಕೂಗಿದರು. ಯತ್ನಾಳರೇ ಹೆದರಬೇಡಿ ನಾವು ನಿಮ್ಮೊಂದಿಗಿದ್ದೇವೆ, ನಿಮ್ಮೊಂದಿಗೆ ಇದ್ದೇವೆ ಎಂದು ಯತ್ನಾಳರ ಭಾವಚಿತ್ರ ಹಿಡಿದು ಬೆಂಬಲ ಘೋಷಿಸಿದರು.