ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ ಪೂರೈಸಿರುವ ಆರ್.ಅಶೋಕ್ ಅವರು ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಯಾಗಿದ್ದು ಹೀಗೆ.
ಅಖಿಲ ಭಾರತ ವೀರಶೈವ ಮಹಾಸಭಾ ಕೇವಲ ಖಂಡ್ರೆ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕಷ್ಟೇ ಸೀಮಿತವಾಗಿದೆ, ಮಹಾಸಭಾದಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಕೊಡುಗೆ ಇಲ್ಲವೆಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಗುರ ಹೇಳಿಕೆಯನ್ನು ಶಂಭು ಎಸ್. ಉರೇಕೊಂಡಿ ಖಂಡಿಸಿದ್ದಾರೆ.
ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯ ಸುಮಾರು 25ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.