ಯುವನಿಧಿ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಲಹೆ
Jan 09 2024, 02:00 AM ISTಬಾಗಲಕೋಟೆ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಯುವನಿಧಿ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಡಿಸಿ ಜಾನಕಿ ಕೆ.ಎಂ. ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಪದವಿ ಹಾಗೂ ಡಿಪ್ಲೊಮಾ ಕಾಲೇಜಿನಲ್ಲಿ 2023ರ ಜನವರಿ 1ರಿಂದ ಪಾಸಾದ ವಿದ್ಯಾರ್ಥಿಗಳು ಈ ಯೋಜನೆಯಡಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಅರ್ಹ ವಿದ್ಯಾರ್ಥಿಗಳ ಮಾಹಿತಿ ಕ್ರೋಡೀಕರಿಸಿ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.