ಸತ್ತೇಗಾಲ ಯೋಜನೆ: ಜನರ ದಾಹ ತಣಿಸಲಿದ್ದಾಳೆ ಕಾವೇರಿ !

Dec 15 2023, 01:31 AM IST
ಬಯಲು ಸೀಮೆ ಜಿಲ್ಲೆ ರಾಮನಗರಕ್ಕೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವ ಸತ್ತೇಗಾಲ ನೀರಾವರಿ ಯೋಜನೆಯಲ್ಲಿ ಜಲಾಶಯಗಳನ್ನು ತುಂಬಿಸುವುದು ಮಾತ್ರವಲ್ಲದೆ ಕೆರೆಗಳನ್ನೂ ಭರ್ತಿ ಮಾಡಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಜನರ ನೀರಿನ ದಾಹ ನೀಗಿಸುವ ಉದ್ದೇಶ ಹೊಂದಲಾಗಿದೆ.ಈ ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ ಸತ್ತೇಗಾಲದಿಂದ ಇಗ್ಗಲೂರು ಎಚ್ .ಡಿ.ದೇವೇಗೌಡ ಬ್ಯಾರೇಜ್ , ಕಣ್ವ, ವೈ.ಜಿ.ಗುಡ್ಡ ಹಾಗೂ ಮಂಚನಬೆಲೆ ಜಲಾಶಯ ತುಂಬಿಸಲಾಗುತ್ತದೆ. ಆನಂತರ ಜಲಾಶಯಗಳಿಂದ ಕೆರೆಗಳಿಗೆ ನೀರು ಹರಿಸಿ ಹಳ್ಳಿಗಳು ಮತ್ತು ಬಿಡದಿ, ಕುಂಬಳಗೂಡು ಪಟ್ಟಣಗಳ ಜನವಸತಿ ಪ್ರದೇಶಗಳಿಗೆ ಕಾವೇರಿ ನೀರು ಪೂರೈಕೆ ಮಾಡಲಾಗುತ್ತದೆ. ಈ ಯೋಜನೆಯಿಂದ ಇಡೀ ರಾಮನರ ಜಿಲ್ಲೆಗೆ ಶಾಶ್ವತ ನೀರಾವರಿ ಸಾಧ್ಯವಾಗಲಿದೆ. ಕೇವಲ ರಾಮನಗರಕಷ್ಟೇ ಅಲ್ಲದೆ, ಮಂಡ್ಯ ಭಾಗಕ್ಕೂ ಅನುಕೂಲವಾಗಲಿದೆ.