ಸಿಂಗಟಾಲೂರು ಏತನೀರಾವರಿ ಯೋಜನೆ: 11 ವರ್ಷದಿಂದ ನೀರು ಬಳಕೆಯಾಗದೇ ಪೋಲು

Dec 04 2023, 01:30 AM IST
1992ರಲ್ಲಿಯೇ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧ ಮಾಡಲಾಯಿತು. ಆದರೆ, ಆಗ ಕಾರ್ಯಗತವಾಗಲಿಲ್ಲ. ನಂತರ ಹೇಗೋ ಆಗೊಮ್ಮೆ, ಈಗೊಮ್ಮೆ ಸರ್ಕಾರದ ಇಚ್ಛಾಶಕ್ತಿಯಿಂದ 30 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡು 2012ರ ನವೆಂಬರ್‌ನಲ್ಲಿ ಲೋಕಾರ್ಪಣೆಗೊಂಡಿತು. ಬಲಭಾಗದಲ್ಲಿ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಯಿತು. ಆದರೆ, ಎಡಭಾಗದಲ್ಲಿ ಮಾತ್ರ ನೀರಾವರಿ ಇವತ್ತಿಗೂ ಆಗುತ್ತಿಲ್ಲ. ಬಲಭಾಗದಲ್ಲಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ನೀರಾವರಿಯಾಗಿದೆ. ರೈತರು ಖುಷಿಯಾಗಿದ್ದಾರೆ. ಆದರೆ, ಇದೇ ಯೋಜನೆಯ ಎಡಭಾಗದಲ್ಲಿ ಸುಮಾರು 2.20 ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕಾರ್ಯ ಇನ್ನು ನಡೆದಿಲ್ಲ.

ಕೂಲಿ ಕಲ್ಪಿಸಲು ನರೇಗಾ ಯೋಜನೆ ಸದ್ಬಳಕೆಯಾಗಲಿ: ಸಚಿವ ಮಧು

Dec 02 2023, 12:45 AM IST
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದು ಪೂರ್ಣಗೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆ ಗಂಗೆ ಮೂಲಕ ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಪೂರೈಸಲಾಗುತ್ತದೆ. ಯಾವ್ಯಾವ ಗ್ರಾಮಗಳು ಯೋಜನೆಯಲ್ಲಿ ಕೈಬಿಟ್ಟು ಹೋಗಿದೆಯೋ ಅಂತಹ ಪ್ರದೇಶಗಳ ಪಟ್ಟಿ ಮಾಡಿಕೊಡಿ. ಜನರಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆ ಆಗಬಾರದು ಎಂದ ಅವರು, ಕೆಲವೆಡೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪಡವಗೋಡು ಗ್ರಾಪಂನ ಕೆಲವು ಗ್ರಾಮಗಳಲ್ಲಿ 3 ತಿಂಗಳಿನಿಂದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ತಕ್ಷಣ ಸರಿಪಡಿಸಿ ಎಂದು ತಾಕೀತು ಮಾಡಿದರು.

ಜಲಜೀವನ್‌ ಯೋಜನೆ ಹಿನ್ನಡೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ

Dec 02 2023, 12:45 AM IST
ತಾಲೂಕಿನ ನೊಣಬೂರು ಹಾದಿಗಲ್ಲು ಮತ್ತು ಕೋಣಂದೂರು ಗ್ರಾಪಂಗಳ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಪ್ರದೇಶದಲ್ಲಿ ಇರುವ ಕೊಳವೆ ಬಾವಿಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬಂದಿರುವುದಾಗಿ ಸಚಿವರ ಗಮನ ಸೆಳೆದ ಶಾಸಕ ಆರಗ ಜ್ಞಾನೇಂದ್ರ, ಈ ಪ್ರದೇಶದ ತೆರೆದ ಬಾವಿಗಳಲ್ಲೂ ಫ್ಲೋರೈಡ್ ಅಂಶ ಇರುವುದು ಆತಂಕಕಾರಿಯಾಗಿದೆ ಎಂದರು. ಈ ಕುರಿತು ಸಚಿವರು ಹಾವೇರಿ ಜಿಲ್ಲೆಯಲ್ಲಿ ಫ್ಲೋರೈಡ್‌ ಅಂಶದ ಬಗ್ಗೆ ಸಂಶೋಧನೆಗೆ ಕ್ರಮ ಕೈಗೊಳ್ಳಲಾಗಿದೆ. ಹೊಸನಗರ ತಾಲೂಕಿನ ಕೆಲವೆಡೆ ಕೂಡ ಈ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಅಗತ್ಯವಾಗಿ ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಸೂಚಿಸಿ ಸಂಶೋಧನೆ ಮಾಡಿಸುವುದಾಗಿಯೂ ತಿಳಿಸಿ, ಎಲೆಚುಕ್ಕಿರೋಗದ ನಿಯಂತ್ರಣದ ಬಗ್ಗೆ ಸಂಬಂಧಿಸಿದ ವಿಜ್ಞಾನಿಗಳ ಜೊತೆ ಚರ್ಚಿಸಿರುವುದಾಗಿಯೂ ತಿಳಿಸಿದರು.

ಪದವೀಧರರ ವಿದ್ಯಾಭ್ಯಾಸಕ್ಕೆ ಅನುಕೂಲವಾದ ನರೇಗಾ ಯೋಜನೆ

Nov 30 2023, 01:15 AM IST
ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಬಡವರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ಜೊತೆಗೆ ಪದವೀಧರರ ಶೈಕ್ಷಣಿಕ ಅಭ್ಯಾಸಕ್ಕೂ ಅನುಕೂಲವಾಗಿದೆ.ತಾಲೂಕಿನ ತಳುವಗೇರಿ ಗ್ರಾಪಂ ವ್ಯಾಪ್ತಿಯ ನಿಡಶೇಸಿ ಗ್ರಾಮದ ಪದವೀಧರೆಯಾದ ಚೈತ್ರಾ ಬಸಪ್ಪ ಕಂದಕೂರ ಎಂಬ ಯುವತಿಯು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಡೆಯುವ ಕಾಮಗಾರಿಯಲ್ಲಿ ಕೆಲಸ ಮಾಡುವ ಮೂಲಕ ಕುಟುಂಬದ ಆರ್ಥಿಕ ಸ್ವಾಲಂಬನೆ ಹಾಗೂ ತನ್ನ ಪದವಿಯ ವ್ಯಾಸಂಗಕ್ಕೂ ಅನುಕೂಲವಾಗಿದೆ. ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡಿ ಮನೆಯಲ್ಲಿ ಕುಳಿತುಕೊಳ್ಳುವ ನಿರುದ್ಯೋಗಿ ವಿದ್ಯಾವಂತರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆ ಬಹಳಷ್ಟು ಅನುಕೂಲವಾಗಿದೆ ಎನ್ನಬಹುದು.