ಸಬ್ಸಿಡಿ ಯೋಜನೆ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಿ
Apr 01 2024, 12:47 AM ISTಬೆಳಗಾವಿ: ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಆಯ್ಕೆಗೊಂಡಿರುವ ಫಲಾನುಭವಿಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ಸಾಲಸೌಲಭ್ಯ ನೀಡಬೇಕು. ಒಂದು ವೇಳೆ ವಿನಾಕಾರಣ ಸಾಲ ನಿರಾಕರಿಸಿದರೆ ಅಂತಹ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.