ಪರಿಸರಕ್ಕೆ ಮಾರಕವಾದ ವಿದ್ಯುತ್ ಯೋಜನೆ ಕೈಬಿಡಿ
Mar 09 2024, 01:31 AM ISTಕರ್ನಾಟಕ ವಿದ್ಯುತ್ ನಿಗಮ ಶರಾವತಿ ಕಣಿವೆಯಲ್ಲಿ ಬೃಹತ್ ಜಾಲ ವಿದ್ಯುತ್ ಯೋಜನೆ ಜಾರಿ ಮಾಡಲು ತಯಾರಿ ನಡೆಸಿದ್ದು, ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡಬೇಕು. ಪಶ್ಚಿಮಘಟ್ಟದ ಹೃದಯ ಭಾಗವಾಗಿರುವ ಶರಾವತಿ ಕಣಿವೆಯಲ್ಲಿ ೨೦೦೦ ಮೆ.ವ್ಯಾ. ಸಾಮರ್ಥ್ಯದ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಜಾರಿಗೆ ಸರ್ಕಾರ ಮತ್ತು ವಿದ್ಯುತ್ ನಿಗಮ ಮುಂದಾಗಿದೆ. ಈ ಹಿನ್ನೆಲೆ ಪರಿಸರ ರಕ್ಷಣೆ ಮಾಡಬೇಕೆಂದು ವೃಕ್ಷಲಕ್ಷ ಆಂದೋಲನದ ನಿಯೋಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿತು.