ನಗರದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಯೋಜನೆ ರೂಪಿಸಿ
Feb 28 2025, 12:50 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸೌಂದರ್ಯಿಕರಣಕ್ಕಾಗಿ ಸ್ವಚ್ಛತೆ, ರಸ್ತೆ ನಿರ್ಮಾಣ, ಉದ್ಯಾನಗಳ ನಿರ್ವಹಣೆ ಸೇರಿದಂತೆ ನಗರದಲ್ಲಿ ಜನದಟ್ಟಣೆ ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಮುಂದಾಗಿದ್ದಾರೆ. ಅಲ್ಲದೇ, ಈ ನಿಟ್ಟಿನಲ್ಲಿ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಕಾರ್ ಪಾರ್ಕಿಂಗ್ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.