ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ
Jun 25 2025, 11:47 PM ISTಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ತಿಳಿಸಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ಶೇ. ೯೯ರಷ್ಟು ಗುರಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.