ಎತ್ತಿನಹೊಳೆ ಯೋಜನೆ ವಿರುದ್ಧ ಪ್ರತಿಭಟನೆ
Nov 29 2024, 01:04 AM ISTಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಮೊಗನಹಳ್ಳಿ, ಹಿರದನಹಳ್ಳಿ ಗ್ರಾಮಸ್ಥರು ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಎತ್ತಿನಹೊಳೆ ಯೋಜನೆ ವಿರುದ್ಧ ಮೊಗನಹಳ್ಳಿ ಡ್ಯಾಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಹತ್ತು ದಿನಗಳ ಒಳಗೆ ತಮ್ಮ ಬೇಡಿಕೆಗಳನ್ನು ಇಡೆರಿಸುವಂತೆ ಒತ್ತಾಯಿಸಿದರು. ಇಲ್ಲವಾದರೆ ಡ್ಯಾಮಿಗೆ ಬೀಗ ಹಾಕಿ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಎಚ್ಚರಿಕೆ ನೀಡಿದರು.