ಪಟ್ಟಣದ ಅಭಿವೃದ್ಧಿ ಪೂರಕ ಯೋಜನೆ ರೂಪಿಸಿ
Oct 05 2024, 01:37 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಚರಂಡಿ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಪಟ್ಟಣದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ಮಾರ್ಟ್‌ಸಿಟಿ ಕನಸಿನ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು.