ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್ ಪ್ರಸಾದ್
Aug 15 2024, 01:48 AM ISTತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.