ವಿಶ್ವಕರ್ಮ ಯೋಜನೆ: ವಿಳಂಬವಿಲ್ಲದೇ ಸಾಲ ನೀಡಲು ಸಚಿವೆ ನಿರ್ಮಲಾಗೆ ಕೋಟ ಮನವಿ
Dec 20 2024, 12:47 AM ISTಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಪ್ರಸ್ತುತ 7 ಸಾವಿರ ಫಲಾನುಭವಿಗಳು ಈ ಯೋಜನೆಯಡಿ ತರಬೇತಿ ಪಡೆದಿದ್ದಾರೆ. ಅವರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡಬೇಕು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದರು.