ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಯೋಜನೆ ನನೆಗುದಿಗೆ!
Jun 14 2024, 01:06 AM ISTಕೃಷಿ ಚಟುವಟಿಕೆ ಮತ್ತು ಕುಡಿಯುವ ನೀರಿಗೆ ನೆರವು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಹುಕ್ಕೇರಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯೊಂದು ಕಳೆದ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರೊಂದಿಗೆ ಬಹುನಿರೀಕ್ಷಿತ ಈ ಯೋಜನೆ ಆರಂಭಿಕ ಹಂತದಲ್ಲೇ ಮುಗ್ಗರಿಸುವ ಅನುಮಾನ ವ್ಯಕ್ತವಾಗಿದೆ. ರೈತ ಸಮುದಾಯದಲ್ಲಿ ಬಹು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದ ತಾಲೂಕಿನ ಆಯ್ದ ಬ್ಯಾರೇಜ್‌ಗಳಿಗೆ ನೀರು ತುಂಬಿಸುವ ಈ ಯೋಜನೆ ಅನುಷ್ಠಾನಕ್ಕೆ ಇದೀಗ ಮೀನಮೇಷ ಎಣಿಸಲಾಗುತ್ತಿದೆ. ಹೀಗಾಗಿ, ಈಗ ಜನರಲ್ಲಿ ನಿರಾಸೆಯ ಛಾಯೆ ಮೂಡಿದಂತಾಗಿದೆ.