ಜಿಲ್ಲೆಯಲ್ಲಿ ಪ್ರಗತಿ ಕಾಣದ ವಸತಿ ಯೋಜನೆ
Aug 19 2024, 12:47 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನೆಯ ನಂತರ ಜಿಲ್ಲೆಯಲ್ಲಿನ ವಸತಿ ಯೋಜನೆಯ ಪ್ರಸ್ತುತ ಪ್ರಗತಿ ಹೋಲಿಕೆ ಮಾಡಿದರೆ ಪ್ರಗತಿಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸುಮಾರು 12,300 ರಷ್ಟು ವಸತಿ ಮನೆಗಳು ಪ್ರಾರಂಭವಾಗದಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ವಸತಿ ಯೋಜನೆಯ ಪ್ರಗತಿ ಕುರಿತು ತಾಪಂನಲ್ಲಿಯೇ ಕಡ್ಡಾಯವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅಧಿಕಾರಿ ಹಾಗೂ ತಾಪಂ.ಸಿಬ್ಬಂದಿಗೆ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.