ಕೃಷ್ಣಾ ಮೇಲ್ದಂಡೆ ಯೋಜನೆ ಬಾಧಿತ ರೈತರಿಗೆ ಎಲ್ಲ ಸೌಲಭ್ಯ ಒದಗಿಸಿ: ಎನ್. ರವಿಕುಮಾರ್
Feb 04 2024, 01:33 AM ISTಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಜಮೀನಿಗೆ ಹಾಗೂ ಅವರಿಗೆ ದೊರಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಶೀಘ್ರವೇ ದೊರಕಿಸಿಕೊಡುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಮತ್ತು ಭೂಸ್ವಾಧೀನ ಕಚೇರಿಗೆ ಭೇಟಿ ನೀಡಿದ ಅವರು, ರೈತರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿ ರಮೇಶ ಕಳಸದ ಅವರಿಗೆ ಸೂಚಿಸಿದರು.