ಸರ್ಕಾರಿ ಯೋಜನೆ ಜವಾಬ್ದಾರಿಯಿಂದ ಬಳಸಿದಾಗ ಸಾರ್ಥಕ: ಸಚಿವ ಮಧು
Jan 30 2024, 02:02 AM ISTಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್‍ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ. ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.