ಸಿಆರ್‌ಪಿಎಫ್ ಯೋಧ ರವಿಶಂಕರ್ ನಿಧನ

Sep 15 2024, 02:00 AM IST
ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮದ ರಾಜೇಗೌಡರ ಒಬ್ಬನೇ ಮಗನಾದ ರವಿಶಂಕರ್ ಅವರು, ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧರೊಬ್ಬರ ರಿಪೋರ್ಟ್ ಪಡೆಯಲು ಆಗಮಿಸಿದ್ದರು ಎನ್ನಲಾಗಿದೆ. ಶುಕ್ರವಾರ ಸಂಜೆ 6.15ರ ಸುಮಾರಿನಲ್ಲಿ ಸುಸ್ತು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯಲು ಹೊಳೆನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ್ದಾರೆ. ಕರ್ತವ್ಯದಲ್ಲಿ ಇದ್ದ ವೈದ್ಯರು ಯೋಧರ ಸಮಸ್ಯೆಯನ್ನು ಸರಿಯಾಗಿ ಕೇಳಿ ತಿಳಿದು ಚಿಕಿತ್ಸೆ ನೀಡದೇ ಮಾತ್ರೆ ಕೊಟ್ಟು ಕಳುಹಿಸಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿನಲ್ಲಿ ಮನೆಯಲ್ಲಿ ರವಿಶಂಕರ್‌ ಕುಸಿದು ಬಿದ್ದಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಕರೆತಂದಾಗ ಪರೀಕ್ಷಿಸಿದ ವೈದ್ಯರು ರವಿಶಂಕರ್‌ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.