ರಸ್ತೆ ಅಗೆದು ಕಾಂಪೌಂಡ್‌ ನಿರ್ಮಾಣ; ಶಾಸಕರ ತರಾಟೆ

Jan 14 2025, 01:02 AM IST
ಕನ್ನಡಪ್ರಭ ವಾರ್ತೆ ನಾಲತವಾಡ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡು ಕಾಂಪೌಂಡ್‌ ನಿರ್ಮಿಸಿಕೊಳ್ಳಲು ಮುಂದಾಗಿದ್ದ ನಾಲತವಾಡದ ವೀರೇಶ್ವರ ವಿದ್ಯಾ ಸಂಸ್ಥೆಯವರನ್ನು ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಲಿಂಗಸಗೂರ- ಶಿರಾಡೋಣ ರಸ್ತೆಯ ಪಕ್ಕ ಜಾಗವನ್ನು ಅತಿಕ್ರಮಿಸಿಕೊಂಡು ಅನಧಿಕೃತವಾಗಿ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದರು. ಶಾಸಕರು ಅದನ್ನು ತಡೆದು ಸಂಸ್ಥೆಯವರಿಗೆ ರಾಜ್ಯ ಹೆದ್ದಾರಿ ಪಕ್ಕವೇ ಕಾಂಪೌಂಡ್ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಅನಾನುಕೂಲ ಆಗುವುದಿಲ್ಲವೇ. ಅಷ್ಟು ಸಾಮಾನ್ಯ ಜ್ಞಾನ ಕೂಡ ಇಲ್ಲವೇನು ಎಂದು ಸಂಸ್ಥೆಯವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.