ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್
Apr 09 2025, 12:34 AM ISTಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು.