35 ಲಕ್ಷ ವೆಚ್ಚದ ಒಳಚರಂಡಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
Sep 27 2024, 01:16 AM ISTಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ 35 ಲಕ್ಷ ರು. ವೆಚ್ಚದಲ್ಲಿ ಒಳ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಹೇಳಿದರು. ತಾವರೆಕೆರೆ ಗ್ರಾಮದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದರ ಜೊತೆಗೆ 35 ಲಕ್ಷ ವೆಚ್ಚದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಲಾಗಿದೆ.