ರಸ್ತೆ ಸಹಿತ ಸಮಸ್ಯೆಗಳ ಪರಿಹಾರ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Jul 26 2024, 01:33 AM ISTಗ್ರಾಮದ ರಸ್ತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿರಾಜಪೇಟೆ ಸಮೀಪದ ಕೆದಮುಳ್ಳೂರು, ತೆರ್ಮೆಮೊಟ್ಟೆ, ಬಾರಿಕಾಡು ಸೇರಿದಂತೆ ಪಾಲಂಗಾಲ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು. ರಸ್ತೆ ಕುಸಿದು ಒಂದು ತಿಂಗಳಾದರೂ ಬದಲಿ ರಸ್ತೆ ವ್ಯವಸ್ಥೆ ಮಾಡದ ತಾಲೂಕು ಆಡಳಿತ ಕಾರ್ಯವೈಖರಿಗೆ ಬೇಸತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.