ತೊಗರನಹಳ್ಳಿ ರಸ್ತೆ ಡಾಂಬರೀಕರಣಕ್ಕೆ ಒತ್ತಾಯ

Sep 12 2025, 12:06 AM IST
ಈ ರಸ್ತೆಯ ದುರಸ್ತಿಗೆ ಒತ್ತಾಯಿಸಿ ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ತೊಗರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಕ್ಕೆ ಹೋಗಬೇಕಾಗಿದ್ದು, ದಿನಕ್ಕೆರಡು ಬಾರಿ ಬರುವ ಸಾರಿಗೆ ಬಸ್ ಬಸ್ಸನ್ನೇ ಅವಲಂಭಿಸಿದ್ದಾರೆ. ರಸ್ತೆ ಹದಗಟ್ಟ ಕಾರಣ ಕೆಲವೊಮ್ಮೆ ಈ ಬಸ್ ಬರಲು ಸಾಧ್ಯವಾಗದೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪರದಾಡುವಂತಾಗಿದೆ. ಇನ್ನು ಇತರೆ ವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುವಂತಾಗಿದೆ.