ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ
Apr 03 2025, 12:30 AM ISTಸರ್ಕಾರದ ಜನ ವಿರೋಧಿ ಬೆಲೆ ಏರಿಕೆ ವಿರೋಧಿಸಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಬುಧವಾರ ಕೊಣನೂರಿನ ಸಿದ್ದಾಪುರ ಗೇಟ್‌ನಲ್ಲಿ ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು. ಒಂದೇ ಬಾರಿಗೆ ಒಂದು ಲೀಟರ್‌ಗೆ ನಾಲ್ಕು ರು. ಹೆಚ್ಚಿಸಿದ್ದಾರೆ. ಒಟ್ಟಾರೆ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರ್‌ಗೆ 9 ರು. ಹೆಚ್ಚಿಸಿದ್ದಾರೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನ ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರುಗಟ್ಟುವ ಸ್ಥಿತಿ ಬಂದಿದೆ. ನೋವು ಅನುಭವಿಸುತ್ತಿರುವ ಜನಪರ ನಿಲ್ಲುವ ಪರಿಸ್ಥಿತಿ ಉದ್ಭವವಾಗಿದೆ ಎಂದರು.