ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗ ಬಳಕೆಗೆ ಬರೋಬ್ಬರಿ 3,011 ಕೋಟಿ ರು. ಮೊತ್ತದ ಟಿಡಿಆರ್ ಪರಿಹಾರ ನೀಡಲು ನ್ಯಾಯಾಲಯ ನೀಡಿರುವ ಆದೇಶದಿಂದ ಪಾರಾಗಲು ರಸ್ತೆ ಅಗಲೀಕರಣ ಪ್ರಸ್ತಾವನೆಯನ್ನೇ ಕೈಬಿಡುವ ಕುರಿತು ನಿರ್ಧಾರ ಕೈಗೊಳ್ಳಲು ತುರ್ತು ಸಭೆ ಕರೆಯಲಾಗಿದೆ.