ರಾಜಕೀಯ ದ್ವೇಷ: ಭೀಮನಗೌಡನ ಬರ್ಬರ ಹತ್ಯೆ
Sep 04 2025, 01:01 AM ISTಕನ್ನಡಪ್ರಭ ವಾರ್ತೆ ಚಡಚಣ  ಬಾಗಪ್ಪ ಹರಿಜನ ಕೊಲೆಯಾಗಿ ವರ್ಷ ತುಂಬುವುದರೊಳಗೆ ಭೀಮಾ ತೀರದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಭೀಕರ ಹತ್ಯೆ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ರೌಡಿಶೀಟರ್ ಭೀಮನಗೌಡ ಬಿರಾದಾರ್ (42) ಮೇಲೆ ಮೂರ್ನಾಲ್ಕು ಜನ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬರ್ಬರ ಹತ್ಯೆ ನಡೆಸಿದ್ದಾರೆ. ನಂತರ ಆರೋಪಿಗಳೆಲ್ಲರೂ ಚಡಚಣ ಠಾಣೆಗೆ ತೆರಳಿ ಶರಣಾಗಿದ್ದಾರೆ. ಕೃತ್ಯ ಎಸಗಿದ್ದಾರೆ ಎಂದು ಹೇಳಿಕೊಂಡು ರಜೀವುಲ್ಲಾ ಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಚೋರಗಿ ಠಾಣೆಗೆ ಶರಣಾದ ಆರೋಪಿಗಳು.