ಶಾಸಕ ಪ್ರದೀಪ್ ಈಶ್ವರ್ ಫೇಕ್ ರಾಜೀನಾಮೆ ಪತ್ರ ವೈರಲ್
Jun 06 2024, 12:30 AM ISTಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಜಯಗಳಿಸಿದ್ದು, ಇದರ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿರುವ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಈ ಪತ್ರ ನಕಲಿ ಎಂದು ಶಾಸಕ ಪ್ರದೀಪ್ ಈಶ್ವರ್ ಅವರೇ ಸ್ಪಷ್ಟಪಡಿಸಿದ್ದಾರೆ.