ಪ್ರಮುಖ ಬೇಡಿಕೆಗಳಿಗೆ ರಾಜ್ಯ ಬಜೆಟ್ ಸ್ಪಂದನೆ
Mar 07 2025, 11:46 PM ISTಹಾಸನ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಮನ್ನಣೆ ಸಿಕ್ಕಿದೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪ್ರಮುಖವಾಗಿ ಬೇಲೂರು ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿ ಮೀರಿರುವ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯವ ಸಂಬಂಧ, ಭದ್ರಾ ಅಭಯಾರಣ್ಯದಲ್ಲಿ ಆನೆಧಾಮ ನಿರ್ಮಾಣಕ್ಕೆ ಆರಂಭಿಕವಾಗಿ ಸಿಎಂ ಸಿದ್ದರಾಮಯ್ಯ ಅವರು ೨೦ ಕೋಟಿ ರು. ಅನುದಾನ ನೀಡಿದ್ದಾರೆ.