ಸಣ್ಣ ಕೈಗಾರಿಕೆ ವಲಯದಿಂದ ಹೆಚ್ಚು ಉದ್ಯೋಗ ಸೃಷ್ಟಿ: ರಾಜ್ಯ ಕಾಸಿಯಾ ಅಧ್ಯಕ್ಷ ರಾಜ್‌ಗೋಪಾಲ್
Nov 29 2024, 01:05 AM ISTದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ರಫ್ತು ಕುರಿತು ಅರಿವು ಅಗತ್ಯವಾಗಿದೆ ಎಂದು ರಾಜ್ಯ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜ್‌ಗೋಪಾಲ್ ಹೇಳಿದರು. ಚಾಮರಾಜನಗರದಲ್ಲಿ ಲೀನ್ ಯೋಜನೆ ಮತ್ತು ಝಡ್ಇಡಿ ಹಾಗೂ ರಫ್ತು ಕುರಿತ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.