ರಾಜ್ಯ ಸರ್ಕಾರದಿಂದ ದಲಿತ ವಿರೋಧಿ ನೀತಿ

Aug 09 2025, 12:06 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸರ್ಕಾರ ಮೀಸಲಿರಿಸಿದ ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆಗ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದಾಗ, ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಕಾರ್ಯಕರ್ತರು ನಿಗಮದ ಕಚೇರಿಗೆ ಘೋಷಣೆ ಕೂಗುತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.