ರಾಜ್ಯ ಸರ್ಕಾರದಿಂದ ಪೊಲೀಸ್ ವ್ಯವಸ್ಥೆ ದುರುಪಯೋಗ
Dec 22 2024, 01:33 AM ISTಕನ್ನಡಪ್ರಭ ವಾರ್ತೆ ವಿಜಯಪುರ ಆಡಳಿತ ಪಕ್ಷದ ಸದಸ್ಯರು ಮಾತನಾಡಿದ ರೀತಿ, ನಡೆದುಕೊಂಡ ರೀತಿ ಅಕ್ಷಮ್ಯ ಅಪರಾಧ. ಪ್ರಚೋದನಾಕಾರಿ ವಾತಾವರಣ ಸೃಷ್ಟಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಮೂರು ಬಾರಿ ಹಲ್ಲೆಗೆ ಯತ್ನಿಸಲಾಗಿದೆ. ನಾವು ಪ್ರತಿಭಟನೆ ಮಾಡಿದಾಗ, ಪೊಲೀಸರು ಎಲ್ಲರನ್ನು ಜೈಲಿಗೆ ತಳ್ಳಿದರು. ರಾಜ್ಯ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ನೇರವಾಗಿಯೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.