ರಾಜ್ಯದಲ್ಲಿರುವುದು ರೈತ, ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರ. ಇದು ಅಲಿಬಾಬಾ ಚಾಲೀಸ್ ಚೋರ್ ಸರ್ಕಾರ. ಅತಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಡಿ.6 ಅಥವಾ 9ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ನಮ್ಮ ಹೋರಾಟ ಹತ್ತಿಕ್ಕಲು, ನಮ್ಮ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ. ಪಂಚಮಸಾಲಿ ಸಮಾಜದ ಯಾವುದೇ ಪದಾಧಿಕಾರಿಯನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ.
ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ