ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು ಇಂದು, ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಸದ್ಯಕ್ಕೇನೂ ತೊಂದರೆಯಿಲ್ಲ ಎಂದು ತಮ್ಮ ಭವಿಷ್ಯವಾಣಿಯಂದ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಸೋಮವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ.
ಮೋದಿ ಸರ್ಕಾರದ ಜನೌಷಧಿ ರೀತಿಯಲ್ಲಿ ತಮಿಳುನಾಡಿನಾದ್ಯಂತ ಸಬ್ಸಿಡಿ ದರದಲ್ಲಿ ಜನರಿಗೆ ಔಷಧಿಗಳನ್ನು ಒದಗಿಸುವ ಸುಮಾರು 1 ಸಾವಿರ 'ಮುದಲ್ವಾರ್ ಮರುಂಧಗಂಗಲ್' ಔಷಧ ಅಂಗಡಿಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಇವನ್ನು ಉದ್ಘಾಟಿಸಿದರು.
ಗೃಹಜ್ಯೋತಿ ಹಣವನ್ನು ಮುಂಗಡವಾಗಿಯೇ ಎಸ್ಕಾಂಗಳಿಗೆ ಪಾವತಿಸುತ್ತಿದೆ. ಯಾವುದೇ ಕಾರಣಕ್ಕೂ ಗೃಹಜ್ಯೋತಿ ಹಣ ಗ್ರಾಹಕರಿಂದ ವಸೂಲಿ ಮಾಡುವುದಿಲ್ಲ. ಈ ಬಗ್ಗೆ ಕೆಇಆರ್‌ಸಿಗೆ ಅನಗತ್ಯವಾಗಿ ಪ್ರಸ್ತಾವನೆ ಸಲ್ಲಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ನೋಟಿಸ್ ನೀಡುತ್ತೇವೆ
ರಾಜ್ಯ ಸರ್ಕಾರ ಸಾರಿಗೆ ನೌಕರರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.
ಮೈಕ್ರೋ ಫೈನಾನ್ಸ್ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೂ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ.