ರೈತರ ಸಂಕಷ್ಟ ರಾಜ್ಯ ಸರ್ಕಾರಕ್ಕೆ ಕಾಣುತ್ತಿಲ್ಲ: ಶಾಸಕ ಸುರೇಶ್ಗೌಡ
Mar 13 2024, 02:00 AM ISTನಾವು ಪೇಪರ್ ಮೇಲಷ್ಟೇ ಶಾಸಕರಾಗಿದ್ದೇವೆ, ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ರುಪಾಯಿ ಅನುದಾನ ಕೊಟ್ಟಿಲ್ಲ. ಎಲ್ಲೆಡೆ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಎದುರಾಗಿ ತೋಟಗಳು ಒಣಗಿ ರೈತರು ಕಂಗಾಲಾಗಿದ್ದಾರೆ. ರೈತರ ಸಂಕಷ್ಟಗಳು ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಬೀಳುತ್ತಿ ಲ್ಲವೆ? ರೈತರ ಸಮಸ್ಯೆ ನಿವಾರಣೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತುಮಕೂರು ಗ್ರಾಮಾಂತರ ಶಾಸಕ ಸುರೇಶ್ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.