ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ
Jan 27 2024, 01:22 AM ISTರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ. ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.