ಎಸ್ಟಿ ಮೀಸಲು ಹೆಚ್ಚಳಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಿ

Oct 29 2023, 01:00 AM IST
ವಾಲ್ಮೀಕಿ ನಾಯಕ ಸಮಾಜಕ್ಕೆ ಶೇ. 7ರಷ್ಟು ಮೀಸಲಾತಿಯನ್ನು ಹಿಂದಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿದೆ. ಸಂವಿಧಾನದ 9 ಶೆಡ್ಯೂಲ್‌ನಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಬಳ್ಳಾರಿಯ ಸಹಕಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಶಿಕ್ಷಣದಲ್ಲಿ ಶೇ. ೭, ಉದ್ಯೋಗದಲ್ಲಿ ಹಾಗೂ ಮುಂಬಡ್ತಿಯಲ್ಲಿ ಶೇ. 7ರಷ್ಟು ಮೀಸಲಾತಿ ದೊರೆತಿದೆ. ವಾಲ್ಮೀಕಿ ಸಮಾಜದ ಅಧಿಕಾರಿಗಳು ಶೇ. ೭ರಷ್ಟು ಮೀಸಲಾತಿ ಪಡೆದಿದ್ದಾರೆ. ನನ್ನ ಅಧಿಕಾರ ಅವಧಿಯಲ್ಲಿ ಸಮಾಜದ ಏಳ್ಗೆಗೆ ಹಾಗೂ ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಿದ್ದು, ಮೀಸಲಾತಿ ಜಾರಿಯೂ ಆಗಿದೆ ಎಂದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Oct 18 2023, 01:00 AM IST
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಗುತ್ತಿಗೆದಾರನ ಮನೆಯೊಂದರಲ್ಲಿ ಸಿಕ್ಕಿದ 40 ಕೋಟಿ ರುಪಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅರುಣಕುಮಾರ್ ಆಗ್ರಹಿಸಿದರು.ಅವರು ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟಿಗಟ್ಟಲೆ ಹಣ ದೊರೆತಿದೆ. ಈ ಮಾರ್ಗವಾಗಿ ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡುವ ದಂಧೆ ಮಾಡುತ್ತಿರುವುದು ಸಾಬೀತಾಗಿದೆ. ಜನರಿಗೆ ಬಿಟ್ಟಿ ಭಾಗ್ಯಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ದಿವಾಳಿ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು.