ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ವಿಜಯೇಂದ್ರ
Mar 01 2025, 01:01 AM ISTಚಿಕ್ಕಮಗಳೂರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ ಕೂಪಕ್ಕೆ ತಳ್ಳಿರುವುದು ನಿಜಕ್ಕೂ ದುರ್ದೈವ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಮಾ. 7 ರಂದು 16ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂದು ಅವರು ಹೆಮ್ಮೆ ಯಿಂದ ಹೇಳುತ್ತಿದ್ದಾರೆ. ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.