ರಾಜ್ಯ ಪತ್ರಕರ್ತರ ಸಮ್ಮೇಳನ; ವೈಭವದ ಮೆರವಣಿಗೆ
Feb 04 2024, 01:34 AM ISTಜಯದೇವ ವೃತ್ತದಿಂದ ಆರಂಭವಾದ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪರನ್ನು ಬೆಳ್ಳಿ ರಥದಲ್ಲಿ ಗೌರವ ಪೂರ್ವಕವಾಗಿ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.