ಕೆರಗೋಡು ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ
Jan 30 2024, 02:01 AM IST ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಾನ್ ಧ್ವಜ ಕೆಳಗಿಳಿಸಿ ಸಮಸ್ತ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿ ರಾಜ್ಯ ಸರ್ಕಾರದ ನಡೆ ಖಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.