ರಾಜ್ಯ ಸುರಭಿಶ್ರೀ ಪ್ರಶಸ್ತಿಗೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆ
Dec 03 2023, 01:00 AM ISTಗೌರಿಗದ್ದೆಯ ಸ್ವರ್ಣ ಪೀಠಿಕಾಪುರ ಅವದೂತ ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಿವ್ಯ ಸಾನ್ನಿಧ್ಯವನ್ನು ಕರ್ಕಿ ಕ್ಷೇತ್ರದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ವಹಿಸುವರು. ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಲಕ್ಕವಳ್ಳಿ ಮೋಕ್ಷ ಮಂದಿರದ ವೃಷಭಸೇನ ಪಟ್ಟಾಚಾರಕ ಮಹಾಸ್ವಾಮಿಗಳು, ರೇವಣಸಿದ್ದೇಶ್ವರ ಮಹಾಸ್ವಾಮಿಗಳು ದುಗ್ಲಿ, ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರಮಠ ಭಾಗವಹಿಸುವರು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿಡಿ ಪಿಕ್ಚರ್ ಪ್ರೈವೈಟ್ ಲಿಮಿಟೆಡ್‌ನ ಎಂ.ವಿ. ಕೃಷ್ಣಪ್ಪ, ಮಾಜಿ ಶಾಸಕ ಗಂಗಾಧರ್ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.