ರಾಜ್ಯ ಬಜೆಟ್‌ನತ್ತ ಮೇಲೆ ಮುಳುಗಡೆ ನಾಡಿನ ಜನತೆಯ ಚಿತ್ತ
Feb 15 2024, 01:35 AM ISTಬಾಗಲಕೋಟೆ: ಕಳೆದ ಕೆಲ ವರ್ಷಗಳಿಂದ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಜಿಲ್ಲೆಗೆ ಘೋಷಣೆಯಾಗಿರುವ ಬಹುತೇಕ ಯೋಜನೆಗಳನ್ನು ಪೂರ್ಣಗೊಳಿಸದೆ, ಅಗತ್ಯ ಅನುದಾನ ನೀಡದೆ ಇರುವ ಕಾರಣಕ್ಕೆ ಬಹುತೇಕ ಯೋಜನೆಗಳಿಗೆ ಹಿನ್ನೆಡೆಯಾಗಿದೆ. ಕಳೆದ ಎರಡು ವರ್ಷದ ಹಿಂದೆ ಜಿಲ್ಲೆಗೆ ಘೋಷಣೆಯಾದ ಗುಳೇದಗುಡ್ಡದ ಜವಳಿ ಪಾರ್ಕ್ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ನಿಗದಿಯಾದ ₹ 5 ಸಾವಿರ ಕೋಟಿಯಲ್ಲಿ ನಿರೀಕ್ಷಿತ ಹಣ ನೀಡದೆ ಹೋಗಿದ್ದರಿಂದ ಯೋಜನೆ ಪೂರ್ಣಗೊಳ್ಳಲು ಬಹುದೊಡ್ಡ ಹಿನ್ನಡೆಯಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಈ ಯೋಜನೆಗಳಿಗೆ ಅಗತ್ಯ ಅನುದಾನ ಸಿಗುವುದೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕಾತರರಾಗಿದ್ದಾರೆ.