ರಾಜ್ಯ ಹೆದ್ದಾರಿ ವಿಸ್ತರಣೆ ಶೀಘ್ರ ಪೂರ್ಣಗೊಳಿಸಲು ಆಗ್ರಹ
Feb 03 2024, 01:47 AM ISTಲೋಕಾಪುರ: ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಅಪಘಾತಕ್ಕೆ ಕಾರಣವಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಅಪಘಾತ ತಡೆಗೆ ಪಟ್ಟಣದಲ್ಲಿ ಬಸವೇಶ್ವರ ವೃತ್ತದಿಂದ ಶಿವಾಜಿ ವೃತ್ತದವರೆಗೆ ರಸ್ತೆ ವಿಸ್ತರಣೆ ಕಾರ್ಯ ನಡೆಯುತ್ತಿದೆ. ಲೋಕಾಪುರದಿಂದ ಮುಧೋಳ ರಸ್ತೆ ಅಗಲೀಕರಣ ಕಾಮಗಾರಿಯಿಂದಾಗಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ವಿಭಜನೆ ಸಲುವಾಗಿ ರಸ್ತೆ ಅಗೆದಿದ್ದು ವಾಹನಸವಾರರಿಗೆ ತಗ್ಗು ಕಾಣಲಾರದೆ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿವೆ.