: ಟಿಡಿಆರ್ ಸಂಬಂಧ ನಮ್ಮ ಕುಟುಂಬಕ್ಕೆ ₹3400 ಕೋಟಿ ನೀಡಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದೇಶವನ್ನು ಪಾಲಿಸಬೇಕಾಗಿರೋದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದ್ದಾರೆ.
ಮಹತ್ವದ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡಗಳಲ್ಲಿ (ಎಸ್ಐಟಿ) ಕಾರ್ಯನಿರ್ವಹಿಸಿದ್ದ ಎಸ್ಪಿ ಸಿ.ಎ.ಸೈಮನ್ ಅವರಿಗೆ ವರ್ಷದಿಂದ ಹುದ್ದೆ ತೋರಿಸದೆ ಮನೆಯಲ್ಲಿ ಕುರಿಸಿರುವ ರಾಜ್ಯ ಸರ್ಕಾರದ ಕ್ರಮ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಸರ್ಕಾರಿ ಕಚೇರಿಗಳು ಭ್ರಷ್ಟಾಚಾರ ಮತ್ತು ಅಕ್ರಮಗಳ ಕೂಪವಾಗಿವೆ. ಆಡಳಿತ ಕುಸಿದಿರುವುದರಿಂದ ಜನರು ಮೈಕ್ರೋ ಫೈನಾನ್ಸ್ನಂತಹ ಸಮಸ್ಯೆಗಳಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ ಎಂದು ಕೆ.ಆರ್.ಎಸ್. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲೆಯ ಉಸ್ತುವಾರಿ ದೀಪಕ್ ತಿಳಿಸಿದರು.
ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಮುಂದಿನ ಒಂದು ವಾರದೊಳಗೆ ₹3,400 ಕೋಟಿ ರು. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮಾವು ಮತ್ತು ರೇಷ್ಮೆ ಬೆಳೆಯನ್ನು ಅವಲಂಬಿಸಿದ್ದಾರೆ. ರಾಜ್ಯ ಬಜೆಟ್ನಲ್ಲಿ ಈ ಎರಡು ಬೆಳೆಗಳಿಗೂ ಆದ್ಯತೆ ನೀಡಿ ಬೆಳೆಗಾರರ ರಕ್ಷಣೆ ಮಾಡಬೇಕು ಎಂದು ಸಂಸದ ಡಾ.ಸಿ.ಎನ್ .ಮಂಜುನಾಥ್ ಸಲಹೆ ನೀಡಿದರು.