ಹೆಚ್ಚು ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತನ್ನಿ: ಶಾಸಕ ಎನ್. ಶ್ರೀನಿವಾಸ್
Feb 20 2025, 12:46 AM ISTವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖವಾಗಿದ್ದು, ಆತಂಕ ಬಿಟ್ಟು ಸಮಯವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚು ಅಂಕಗಳಿಸಿ ರಾಜ್ಯಮಟ್ಟದಲ್ಲಿ ತಾಲೂಕಿಗೆ ಕೀರ್ತಿ ಬರುವಂತೆ ಮಾಡಬೇಕು. ಹಿಂದಿನ ದಿನಗಳಲ್ಲಿ ಸೌಲಭ್ಯಗಳಿರಲಿಲ್ಲ. ಆದರೆ, ಈಗ ಎಲ್ಲ ಸೌಲಭ್ಯಗಳಿದ್ದೂ ಸಾಧನೆಗೆ ಮುಂದಡಿಯಿಡಬೇಕು. ಪರೀಕ್ಷೆಯ ದಿನಗಳು ಸಮೀಪಿಸುತ್ತಿದ್ದು, ಪರೀಕ್ಷೆ ಭಯ ಬಿಟ್ಟು ಆತ್ಮಸ್ಥೆರ್ಯದಿಂದ ಎಲ್ಲಾ ವಿಷಯಗಳ ಬಗ್ಗೆ ಗಮನವಹಿಸಿ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಿ, ವಿದ್ಯಾರ್ಥಿಗಳು ನಿರಂತರ ಪರಿಶ್ರಮಪಟ್ಟರೆ ಯಶಸ್ಸು ಸಾಧ್ಯವಾಗಲಿದೆ. ಕಲಿಕೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದರು.