ಫೆಬ್ರವರಿ 7, 8ರಂದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಜಿಲ್ಲಾಧಿಕಾರಿ ವೆಂಕಟೇಶ್
Feb 02 2025, 01:04 AM ISTನಗರದ ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಫೆ.7 ಹಾಗೂ 8ರಂದು 2024-25ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಉಪ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ ಮಕ್ಕಳು, ಶಿಕ್ಷಕರ ವಸತಿ ಹಾಗೂ ಊಟದ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.