ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.
ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯದ ನಡುವೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.