28ರಿಂದ ಬಾಗಲೂರಿನಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನ
Dec 24 2024, 12:50 AM ISTಚಿತ್ರದುರ್ಗ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ-ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಶಾಲಾ ಕಾಲೇಜುಗಳ ಒಕ್ಕೂಟ, ಕರ್ನಾಟಕ ರಾಜ್ಯ ಮಾನವ ಬಂಧುತ್ವ ವೇದಿಕೆ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಇವುಗಳ ಸಹಯೋಗದೊಂದಿಗೆ ಡಿ.28 ಮತ್ತು 29ರಂದು 2 ದಿನಗಳ ಕಾಲ ಬಾಗಲೂರಿನ ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 4ನೇ ವೈಜ್ಞಾನಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ಸಂಗಂ ತಿಳಿಸಿದರು.